ಬದಿಯಡ್ಕ: ವಿದ್ಯುತ್ ದರ ಏರಿಕೆಯ ವಿರುದ್ಧ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನೀರ್ಚಾಲು ಘಟಕದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಏಕಾಏಕಿ ವಿದ್ಯುತ್ ದರ ಏರಿಕೆ ಖಂಡಿಸಿ ನೀರ್ಚಾಲು ಕೆಳಗಿನ ಪೇಟೆಯಿಂದ ಮೇಲಿನ ಪೇಟೆಯವರೆಗೆ ನಡೆಸಿದ ಪಂಜಿನ ಮೆರವಣಿಗೆಯಲ್ಲಿ ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಪ್ರಧಾನ ಕಾರ್ಯದರ್ಶಿ ರವಿ.ಕೆ., ಖಜಾಂಜಿ ಗೋಪಾಲ, ಸದಸ್ಯರಾದ ಹರಿಪ್ರಕಾಶ್, ನಾರಾಯಣ ಇ., ಶಾಫಿ ಪಟ್ಲ ಮೊದಲಾದವರು ನೇತೃತ್ವ ವಹಿಸಿದ್ದರು.