ಕಾಸರಗೋಡು: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆಲಂಪಾಡಿ ಚಕ್ಕರಪಳ್ಳ ನಿವಾಸಿ ಅಮೀರಲಿ(22)ಎಂಬಾತನನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ವಿದ್ಯಾನಗರ ಮತ್ತು ಮೇಲ್ಪರಂಬ ಠಾಣೆಗಳಲ್ಲಿ ಈತನ ವಿರುದ್ಧ ಹಲವು ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಈತನ ವಿರುದ್ಧ'ಕಾಪಾ'ಅನ್ವಯ ಕೇಸು ದಾಖಲಿಸಲಾಗಿದೆ. ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಠಾಣೆ ಇನ್ಸ್‍ಪೆಕ್ಟರ್ ಯು.ಪಿ ವಿಪಿನ್ ಆರೋಪಿಯನ್ನು ಬಂಧಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.