ಕಾಸರಗೋಡು : ಜಿಲ್ಲೆಯ ಎಲ್ಲ 48 ಸ್ಥಳೀಯಾಡಳಿತ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರ ಸಭೆಯನ್ನು ಆನ್‍ಲೈನ್ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಯೋಜಿಸಿದ್ದರು. ಕಾಸರಗೋಡು ಜಿಲ್ಲೆಯ 38 ಗ್ರಾಮ ಪಂಚಾಯಿತಿಗಳು, 3ನಗರಸಭೆಗಳು, ಜಿಲ್ಲಾ ಪಂಚಾಯಿತಿ ಮತ್ತು ಆರು ಬ್ಲಾಕ್ ಪಂಚಾಯಿತಿಗಳು ಸೇರಿದಂತೆ 48 ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧೀಗಳ ಸಭೆ ಆಯೋಜಿಸಲಾಗಿತ್ತು.
ಬಡತನ ನಿರ್ಮೂಲನೆ, ಗುಣಮಟ್ಟ ಆಧಾರಿತ ಉಪಶಾಮಕ ಆರೈಕೆ ಮತ್ತು ತ್ಯಾಜ್ಯ ಮುಕ್ತ ಕೇರಳ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳು ನೇರ ಪಾತ್ರವನ್ನು ವಹಿಸುತ್ತವೆ ಮತ್ತು ಮುಂದಾಳತ್ವ ವಹಿಸುತ್ತವೆ. ಈ ಚಟುವಟಿಕೆಗಳನ್ನು ಸಮಯೋಚಿತವಾಗಿ ಪೂರ್ಣಗೊಳಿಸುವುದರ ಜತೆಗೆ ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು
ಕಾಸರಗೋಡು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಶಕುಂತಲಾ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜಾಸ್ಮಿನ್ ಕಬೀರ್, ಶೈಲಜಾ, ಶಿನೋಜ್ ಚಾಕೊ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಇತರರು ಭಾಗವಹಿಸಿದ್ದರು.