ಕಾಸರಗೋಡು: ವಿಶ್ವ ಏಡ್ಸ್ ವಿರುದ್ಧ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಉದ್ಘಾಟನೆ ವಿಚಾರ ಸಂಕಿರಣ, ಜಾಗೃತಿ ರ್ಯಾಲಿ, ರೆಡ್ ರಇಬ್ಬನ್ ದರಿಸುವಿಕೆ, ಜಾನಪದ ಅಭಿಯಾನ ಹೀಗೆ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾಸರಗೋಡು ಜಿಲ್ಲಾ ವೈದ್ಯಕೀಯ ಕಛೇರಿ (ಆರೋಗ್ಯ) ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಕೇರಳ ಏಡ್ಸ್ ನಿಯಂತ್ರಣ ಸೊಸೈಟಿ ಜಂಟಿಯಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಿತ್ತು. ಕಾಸರಗೋಡು ನಗರಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಶಾಸಕ ಎನ್.ಎ ನೆಲ್ಲಿಕುನ್ನು ಉದ್ಘಾಟಿಸಿದರು. ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಎಸ್.ಎನ್.ಸರಿತಾ ಏಡ್ಸ್ ದಿನದ ಪ್ರತಿಜ್ಞೆ ಬೋಧಿಸಿದರು. ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಎ.ವಿ.ರಾಮದಾಸ್ ಏಡ್ಸ್ ದಿನಾಚರಣೆಯ ಸಂದೇಶ ನೀಡಿದರು. ಕಾಸರಗೋಡುನಗರಸಭೆಯ ಆರೋಗ್ಯ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷ ಖಾಲಿದ್ ಪಚ್ಚಕ್ಕಾಡ್, ಕೌನ್ಸಿಲರ್ ವಿಮಲಾ ಶ್ರೀಧರ್, ಜನರಲ್ ಆಸ್ಪತ್ರೆ ಉಪ ಅಧೀಕ್ಷಕ ಡಾ.ಜಮಾಲ್ ಅಹಮದ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ರಾಷ್ಟ್ರೀಯ ಆರೋಗ್ಯ ಮಿಷನ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಡಾ.ಸಚಿನ್ ಸೆಲ್ವ್ ಉಪಸ್ಥಿತರಿದ್ದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಮತ್ತು ಜಿಲ್ಲಾ ಟಿಬಿ ಅಧಿಕಾರಿ ಡಾ. ಆರತಿ ರಂಜಿತ್ ಸ್ವಾಗತಿಸಿದರು. ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮತ್ತಿಲ್ ವಂದಿಸಿದರು.