ನವದೆಹಲಿ: ಲೋಕಸಭೆಯ ಮಹಾ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಅವರ ಅಧಿಕಾರ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಉತ್ಪಲ್ ಅಧಿಕಾರ ಅವಧಿಯನ್ನು 2025ರ ನ.30ರವರೆಗೆ ವಿಸ್ತರಿಸಿ, ಆದೇಶ ಹೊರಡಿಸಿದ್ದಾರೆ.
ಉತ್ತರಾಖಂಡ ಕೇಡರ್‌ನ 1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಉತ್ಪಲ್ 2020ರ ಡಿ.1ರಂದು ಲೋಕಸಭೆಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಉತ್ಪಲ್ ಅವಧಿ ಎರಡನೇ ಬಾರಿ ವಿಸ್ತರಣೆಯಾಗಿದೆ.