ನವದೆಹಲಿ: ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ದನದ ಮಾಂಸ ಬಡಿಸು ವುದನ್ನು ಮತ್ತು ಸೇವಿಸುವುದನ್ನು ನಿಷೇಧಿ ಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಬುಧವಾರ ಪ್ರಕಟಿಸಿದರು.
ದನದ ಮಾಂಸ ಸೇವನೆಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ ತಂದು ಹೊಸ ನಿಬಂಧನೆಗಳನ್ನು ಸೇರಿಸಲು ರಾಜ್ಯ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಅವರು ಹೇಳಿದರು.
'ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ದನದ ಮಾಂಸ ಸೇವನೆಯನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ' ಎಂದು ಶರ್ಮ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ಸಚಿವ ಸಂಪುಟ ಸಭೆಗೆ ವರ್ಚುವಲ್ ಆಗಿ ಭಾಗಿಯಾಗಿದ್ದರು.
ದನದ ಮಾಂಸಕ್ಕೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಕಾನೂನು ಬಲಿಷ್ಠವಾಗಿದೆಯಾದರೂ, ರೆಸ್ಟೋರೆಂಟ್, ಹೋಟೆಲ್ ಮತ್ತು ಧಾರ್ಮಿಕ ಅಥವಾ ಸಾಮಾಜಿಕ ಸಭೆಗಳಲ್ಲಿ ಅದರ ಸೇವನೆಗೆ ನಿಷೇಧ ಇಲ್ಲ ಎಂದು ಅವರು ವಿವರಿಸಿದರು.
'ಇದೀಗ, ನಾವು ಈ ಕಾನೂನನ್ನು ಇನ್ನಷ್ಟು ಬಲಪಡಿಸುವ ಮೂಲಕ ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ದನದ ಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧಾರ ತೆಗೆದುಕೊಂಡಿದ್ದೇವೆ' ಎಂದು ತಿಳಿಸಿದರು.