HEALTH TIPS

ರೈತರಿಗೆ ನಮ್ಮ ಬಾಗಿಲು ಸದಾ ತೆರೆದಿರುತ್ತದೆ: ಸುಪ್ರೀಂ ಕೋರ್ಟ್

ನವದೆಹಲಿ: ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಫೆಬ್ರುವರಿ 13ರಿಂದ ಪ್ರತಿಭಟನೆಯಲ್ಲಿ ತೊಡಗಿರುವ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಲು ಉನ್ನತ ಮಟ್ಟದ ಸಮಿತಿಯ ಜೊತೆ ಮಾತುಕತೆಗೆ ಒಲವು ತೋರದಿರುವ ಕಾರಣಕ್ಕೆ, 'ರೈತರ ಪಾಲಿಗೆ ನಮ್ಮ ಬಾಗಿಲು ಸದಾ ತೆರೆದಿರುತ್ತದೆ' ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ಮುಖಂಡ ಜಗಜೀತ್ ಸಿಂಗ್ ಡಲ್ಲೇವಾಲ್ ಅವರಿಗೆ ಏನಾದರೂ ತೊಂದರೆ ಆದರೆ ಪಂಜಾಬ್ ಸರ್ಕಾರವನ್ನು ದೂಷಿಸಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ವಲ್ ಭೂಯಾನ್ ಅವರು ಇರುವ ವಿಭಾಗೀಯ ಪೀಠವು ಎಚ್ಚರಿಸಿದೆ. ವೈದ್ಯರ ಸಲಹೆ ಪ್ರಕಾರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಬೇಕಾಗಿದೆ ಎಂದು ಪೀಠ ಹೇಳಿದೆ.

ಕೋರ್ಟ್ ನೇಮಕ ಮಾಡಿರುವ ಸಮಿತಿಯ ಜೊತೆ ಸಮಾಲೋಚನೆ ನಡೆಸಲು ರೈತರು ಒಲವು ತೋರುತ್ತಿಲ್ಲ ಎಂದು ಪಂಜಾಬ್‌ನ ಅಡ್ವೊಕೇಟ್ ಜನರಲ್ ಗುರ್ಮಿಂದರ್ ಸಿಂಗ್ ಪೀಠಕ್ಕೆ ಮಾಹಿತಿ ನೀಡಿದರು.

ಇದಕ್ಕೆ ಪೀಠವು, 'ಕೋರ್ಟ್‌ನ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ. ಯಾವುದೇ ಸಲಹೆ ಅಥವಾ ಬೇಡಿಕೆಯ ಸನ್ನದನ್ನು ರೈತರು ನೇರವಾಗಿ ಅಥವಾ ತಮ್ಮ ಅಧಿಕೃತ ಪ್ರತಿನಿಧಿ ಮೂಲಕ ಸಲ್ಲಿಸಬಹುದು. ಅದನ್ನು ಸೂಕ್ತವಾಗಿ ಪರಿಗಣಿಸಲಾಗುವುದು ಹಾಗೂ ಸಂಬಂಧಪಟ್ಟ ಎಲ್ಲರ ಜೊತೆ ಚರ್ಚಿಸಲಾಗುವುದು' ಎಂದು ಹೇಳಿತು.

ಡಲ್ಲೇವಾಲ್ ಅವರು 20 ದಿನಗಳಿಂದ ಉಪವಾಸ ನಡೆಸುತ್ತಿದ್ದಾರೆ. ಅವರು ವೈದ್ಯಕೀಯ ಪರೀಕ್ಷೆಗೆ ಒಪ್ಪುತ್ತಿಲ್ಲ. ಅವರ ಅಂಗಾಂಗಗಳು ಸರಿಯಾಗಿ ಕೆಲಸ ಮಾಡುತ್ತಿವೆಯಾದರೂ, ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದು ವೈದ್ಯರು ಹೇಳಿದ್ದಾರೆ ಎಂದು ಸಿಂಗ್ ವಿವರಿಸಿದರು. ವಿಚಾರಣೆಯು ಗುರುವಾರ ಮುಂದುವರಿಯಲಿದೆ.

ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ರೈತರ ಮನವೊಲಿಸಬೇಕು ಅಥವಾ ಅವರು ಪ್ರತಿಭಟನೆಯ ಸ್ಥಳವನ್ನು ಬದಲಾಯಿಸುವಂತೆ ಮಾಡಬೇಕು ಎಂದು ಉನ್ನತಾಧಿಕಾರ ಸಮಿತಿಗೆ ಸುಪ್ರೀಂ ಕೋರ್ಟ್‌ ಡಿಸೆಂಬರ್ 13ರಂದು ಸೂಚಿಸಿತ್ತು. ಈ ಸಮಿತಿಯನ್ನು ಕೋರ್ಟ್‌ ನೇಮಕ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries