ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗೆ ಕನ್ನಡದ ವಿದ್ವಾಂಸ, ಭಾಷಾ ವಿಜ್ಞಾನಿ ಹಾಗೂ ವಿಮರ್ಶಕ ಪ್ರೊ.ಕೆ.ವಿ.ನಾರಾಯಣ ಅವರು ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ಮಾರ್ಚ್ 8ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕೆ.ವಿ.ನಾರಾಯಣ ಸೇರಿದಂತೆ 21 ಭಾಷೆಗಳ ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉರ್ದು, ಡೋಗ್ರಿ ಹಾಗೂ ಬಂಗಾಳಿ ಭಾಷೆಯ ಪ್ರಶಸ್ತಿಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಸಾಹಿತ್ಯ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಕನ್ನಡ ವಿಭಾಗದ ಆಯ್ಕೆ ಸಮಿತಿಯಲ್ಲಿ ಓ.ಎಲ್.ನಾಗಭೂಷಣ ಸ್ವಾಮಿ, ಡಾ.ಹಳೆಮನಿ ರಾಜಶೇಖರ್ ಮತ್ತು ಡಾ.ಸರೂಜ್ ಕಾಟ್ಕರ್ ಇದ್ದರು.