ಕೊಲ್ಲಂ: ಕೇಂದ್ರ ಸಚಿವ ಸುರೇಶ್ ಗೋಪಿ ಅವರ ಮನೆಯಲ್ಲಿ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಸಮೀಪವಿರುವ ಸುರೇಶ್ ಗೋಪಿ ಅವರಿಗೆ ಸೇರಿರುವ ಶೆಡ್‌ನಿಂದ ಹಳೆಯ ವಸ್ತುಗಳನ್ನು ಕಳವು ಮಾಡಿದ ಪ್ರಕರಣ ಸಂಬಂಧ 18 ಮತ್ತು 20 ವರ್ಷ ವಯಸ್ಸಿನ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಸುರೇಶ್ ಗೋಪಿ ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇಲ್ಲದಿದ್ದಾಗ ಕಳ್ಳತನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.