ಕೋಲ್ಕತ್ತ: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.
ನಿರ್ಣಯ ಬೆಂಬಲಿಸಿ ಮಾತನಾಡಿದ ಸಚಿವ ಸೋವಂದೇವ್ ಚಟ್ಟೋಪಾಧ್ಯಾಯ, 'ಮಸೂದೆ ಜಾರಿಯಾದರೆ ದೇಶದಲ್ಲಿನ ವಕ್ಫ್ ಆಡಳಿತದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ' ಎಂದರು.
'ನಿರ್ಣಯವನ್ನು ಮಂಡಿಸುವ ಮೂಲಕ ಸದನದ ಸಮಯವನ್ನು ಹಾಳು ಮಾಡಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಪರಿಶೀಲನೆ ನಡೆಸಲೆಂದೇ ಈಗಾಗಲೇ ಜಂಟಿ ಸಂಸದೀಯ ಸಮಿತಿಯನ್ನು ರಚಿಸಲಾಗಿದೆ. ಅದರ ಅವಧಿಯನ್ನು 2025ರ ಬಜೆಟ್ ಅಧಿವೇಶನದ ಕೊನೆಯ ದಿನದವರೆಗೂ ವಿಸ್ತರಿಸಲಾಗಿದೆ' ಎಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನಿರ್ಣಯವನ್ನು ವಿರೋಧಿಸಿ ಮಾತನಾಡಿದರು.
'ವೋಟ್ ಬ್ಯಾಂಕ್ ರಾಜಕಾರಣವನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ಣಯವನ್ನು ತರಲಾಗಿದೆ' ಎಂದರು.
ನಿರ್ಣಯದ ಮೇಲಿನ ಚರ್ಚೆ ವೇಳೆ ಬಿಜೆಪಿ ನಾಯಕರು ಸದನದಿಂದ ಹೊರ ನಡೆದರು.