ನವದೆಹಲಿ: ಯೆಮೆನ್ ದೇಶದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವು ಮಾಡುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಇಂದು (ಮಂಗಳವಾರ) ತಿಳಿಸಿದೆ.
ಪ್ರಕರಣ ಸಂಬಂಧ ಪರ್ಯಾಯ ಆಯ್ಕೆ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.
ಯೆಮೆನ್ ಪ್ರಜೆಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ, ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು.
'ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಅವರ ಮೇಲೆ ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ ಕುರಿತು ನಮ್ಮ ಅರಿವಿಗೆ ಬಂದಿದೆ. ಪ್ರಿಯಾಳ ಕುಟುಂಬ ಪರ್ಯಾಯ ಆಯ್ಕೆ ಕುರಿತು ಪರಿಶೀಲಿಸುತ್ತಿದೆ. ಈ ಸಂಬಂಧ ಸರ್ಕಾರವು ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ಮಾಡಲಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.