HEALTH TIPS

ತಮ್ಮನಿಂದ ಮಹಿಳಾ ಕಾನ್‌ಸ್ಟೆಬಲ್ ಕೊಲೆ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಹತ್ಯೆ?

ಹ್ಯೆದರಾಬಾದ್‌: ತೆಲಂಗಾಣ ಪೊಲೀಸ್ ಇಲಾಖೆಯ ಮಹಿಳಾ ಕಾನ್ಸ್‌ಸ್ಟೆಬಲ್‌ ಒಬ್ಬರನ್ನು ನಡುರಸ್ತೆಯಲ್ಲಿಯೇ ಆಕೆಯ ಸಹೋದರ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಮವಾರ ಹೈದರಾಬಾದ್‌ನ ಇಬ್ರಾಹಿಂಪುರದಲ್ಲಿ ನಡೆದಿದ್ದು, ಮರ್ಯಾದಾ ಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ.ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದ 20ರ ಹರೆಯದ ಮಹಿಳಾ ಕಾನ್‌ಸ್ಟೆಬಲ್ ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಈ ಹತ್ಯೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಬಂದಿದ್ದ ಆರೋಪಿಯು ಹಿಂದಿನಿಂದ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಆಕೆ ಕೆಳಗೆ ಬಿದ್ದಾಗ ಆರೋಪಿಯು ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿಸಿದರು.

ಇದು ಮರ್ಯಾದಾ ಹತ್ಯೆಯ ಪ್ರಕರಣವೇ ಎಂಬುವುದರ ತನಿಖೆ ನಡೆಸುತ್ತಿದ್ದೇವೆ. ಮೃತ ಮಹಿಳೆ ಮತ್ತು ಸಹೋದರನ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆದಿರುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ನಾವಿಬ್ಬರು ಬೇರೆ ಬೇರೆ ಜಾತಿಗೆ ಸೇರಿದ್ದರಿಂದ ನಮ್ಮ ಮದುವೆಗೆ ಆಕೆಯ ಕುಟುಂಬದಿಂದ ವಿರೋಧ ವ್ಯಕ್ತವಾಗಿತ್ತು. ನಾವು ಮದುವೆಯಾದರೆ ಕೊಲೆ ಮಾಡುವುದಾಗಿಯೂ ಆಕೆಯ ಸಹೋದರ ಬೆದರಿಕೆ ಹಾಕಿದ್ದ' ಎಂದು ಮಹಿಳೆಯ ಪತಿ ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

'ಸೋಮವಾರ ಕೆಲಸಕ್ಕೆ ತೆರೆಳಿದ ಬಳಿಕ ಪತ್ನಿಗೆ ನಾನು ಕರೆ ಮಾಡಿದ್ದು, 'ನನ್ನ ಸಹೋದರ ನನ್ನನ್ನು ಕೊಲ್ಲಲು ಬಂದಿದ್ದಾನೆ' ಎಂದು ಅವಳು ನನಗೆ ಹೇಳಿದ್ದಳು. ಅದಾದ ಬಳಿಕ ಸಂಪರ್ಕ ಕಡಿತಗೊಂಡಿತ್ತು' ಎಂದು ತಿಳಿಸಿದ್ದಾರೆ.

'ಇದು ಯೋಜಿತ ಕೊಲೆಯಾಗಿದ್ದು, ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೊಲೆ ಮಾಡಲಾಗಿದೆ' ಎಂದು ಅವರು ಆರೋಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries