ನವದೆಹಲಿ: ವ್ಯಕ್ತಿಯೊಬ್ಬರು ಸಂಸತ್ ಭವನದ ಸಮೀಪ ಇಂದು (ಬುಧವಾರ, ಡಿ.25) ಮಧ್ಯಾಹ್ನ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸಂಸತ್ತಿನ ಎದುರು ಇರುವ ರೈಲ್ವೆ ಭವನದ ಹತ್ತಿರ ಘಟನೆ ನಡೆದಿದೆ. ಈ ಸಂಬಂಧ ಮಧ್ಯಾಹ್ನ 3.35ರ ಸುಮಾರಿಗೆ ಕರೆ ಬಂದಿತ್ತು.
ಸಂಸತ್ತಿನ ಬಳಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿ, ಗಾಯಗೊಂಡಿದ್ದ ವ್ಯಕ್ತಿಯನ್ನು ರಾಮ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದೇಕೆ ಹಾಗೂ ಅವರ ಆರೋಗ್ಯ ಸ್ಥಿತಿ ಸದ್ಯ ಹೇಗಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.