ನವದೆಹಲಿ: ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿ ಕೇಂದ್ರ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್, 'ಸಂವಿಧಾನ ನಿಬಂಧನೆಗಳ ಅನ್ವಯ, ಭಾರತದ ಮುಖ್ಯನ್ಯಾಯಮೂರ್ತಿ ಅವರೊಂದಿಗೆ ಸಮಾಲೋಚಿಸಿ ರಾಷ್ಟ್ರಪತಿ ಅವರು ದೆಹಲಿಯ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ ಎಂದು ತಿಳಿಸಿದ್ದಾರೆ.
ನವೆಂಬರ್ 28ರಂದು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ನ್ಯಾಯಮೂರ್ತಿ ಮನಮೋಹನ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಒಮ್ಮತದ ಶಿಫಾರಸ್ಸು ಮಾಡಿತ್ತು.
ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ 34 ನ್ಯಾಯಮೂರ್ತಿ ಹುದ್ದೆಗಳಿವೆ. ಪ್ರಸ್ತುತ 32 ಮಂದಿ ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.