ಶಹಜಹಾನ್‌ಪುರ : ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿಯಲ್ಲಿ ಕೆಲಸ ಮಾಡುವ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಯಾದವ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
26 ವರ್ಷ ವಯಸ್ಸಿನ ಉದ್ಯೋಗಿ ನೀಡಿದ್ದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ ಎಂದರು.
'ಕಚೇರಿಯಲ್ಲಿ ಅಕೌಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಆರೋಪಿಯು ಸಂಪರ್ಕಿಸಿ, ಡಿಸೆಂಬರ್ 5ರಂದು ಸ್ಥಳೀಯ ಹೋಟೆಲ್‌ಗೆ ಕರೆದಿದ್ದ. ದೈಹಿಕವಾಗಿ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದ ಎಂದು ದೂರು ನೀಡಲಾಗಿದೆ' ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ತಿಳಿಸಿದರು.
ಆರೋಪಿಯು ಪದೇ ಪದೇ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ, ಅಶ್ಲೀಲ ವಿಡಿಯೊಗಳನ್ನು ಕಳುಹಿಸುತ್ತಿದ್ದ ಎಂದು ಮಹಿಳೆಯು ದೂರಿದ್ದಾರೆ ಎಂದು ತಿಳಿಸಿದರು.