ಇಂಫಾಲ್: 'ಕುಕಿ-ಜೊ ಬುಡಕಟ್ಟು ಸಮುದಾಯದ ಜನರು ವಾಸಿಸುವ ಜಿಲ್ಲೆಗಳಲ್ಲಿನ ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್‌ನಲ್ಲಿ ಹಣ ಮೀಸಲಿರಿಸಿ' ಎಂದು ಕೋರಿ ಈ ಸಮುದಾಯಕ್ಕೆ ಸೇರಿದ ಹತ್ತು ಮಂದಿ ಶಾಸಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
'ರಾಜ್ಯ ಸರ್ಕಾರವಂತೂ ನಮ್ಮ ಸಮುದಾಯದ ಜನರನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿ ಮಾಡಿದೆ. ಆದ್ದರಿಂದ ಬಜೆಟ್‌ನಲ್ಲಿ ಹಣ ಮೀಸಲಿರಿಸಿ ಮತ್ತು ನಾವು ವಾಸಿಸುವ ಜಿಲ್ಲೆಗಳಲ್ಲಿ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮರುಜೀವ ನೀಡಲು, ಹೊಸ ಯೋಜನೆಗಳನ್ನು ಜಾರಿ ಮಾಡಲು ಹಣಕಾಸಿನ ನೆರವು ನೀಡಲು ಮಧ್ಯಂತರ ಯೋಜನೆ ರೂಪಿಸಿ' ಎಂದು ಪತ್ರದಲ್ಲಿ ಕೋರಲಾಗಿದೆ.
'ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ಅನುದಾನದಲ್ಲಿ ಬೆಟ್ಟಗಳಿಂದ ಆವೃತವಾಗಿರುವ ಜಿಲ್ಲೆಗಳಲ್ಲಿ ಸುಮಾರು ₹201.50 ಕೋಟಿ ವೆಚ್ಚದಲ್ಲಿ 57 ರಸ್ತೆಗಳನ್ನು ನಿರ್ಮಿಸುವ ಯೋಜನೆಗೆ ಇತ್ತೀಚೆಗಷ್ಟೇ ಒಪ್ಪಿಗೆ ದೊರೆತಿತ್ತು. ಆದರೆ, ಈ ಯೋಜನೆ ಈಗ ಸ್ಥಗಿತಗೊಂಡಿದೆ' ಎಂದು ಪತ್ರದಲ್ಲಿ ತಿಳಿಸಲಾಗಿದೆ.
'ಈಶಾನ್ಯ ಭಾಗದಲ್ಲಿನ ಅಭಿವೃದ್ಧಿಗೆ ಪ್ರಧಾನಮಂತ್ರಿ ಅವರ ಕ್ರಮ' (Pಒ-ಆevIಓಇ) ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ₹104.6 ಕೋಟಿ ಅನುದಾನ ನೀಡಿತ್ತು. ಆದರೆ, ರಾಜ್ಯ ಸರ್ಕಾರ ನಮ್ಮ ಅಭಿವೃದ್ಧಿಗಾಗಿ ಈ ಅನುದಾನವನ್ನು ಬಳಸುತ್ತಿಲ್ಲ' ಎಂದು ಪತ್ರದಲ್ಲಿ ಆರೋಪಿಸಲಾಗಿದೆ.