HEALTH TIPS

Sambhal: ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಪೊಲೀಸರು

ಗಾಜಿಯಾಬಾದ್ : ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವ ಉತ್ತರ ಪ್ರದೇಶದ ಸಂಭಲ್‌ಗೆ ತೆರಳಿರುವ ರಾಹುಲ್ ಗಾಂಧಿ ಅವರನ್ನು ಇಲ್ಲಿನ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ. ವಯನಾಡು ಸಂಸದೆ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಇತರೆ ಹಿರಿಯ ನಾಯಕರೊಂದಿಗೆ ಗಾಜಿಪುರ ಗಡಿಗೆ ರಾಹುಲ್ ಗಾಂಧಿ ತಲುಪಿದರು.

ಅಲ್ಲಿ ಭಾರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ರಾಹುಲ್ ಗಾಂಧಿ ನೇತೃತ್ವದ ನಿಯೋಗವು ಸಂಭಲ್‌ಗೆ ಪ್ರವೇಶಿಸದಂತೆ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಸಂಭಲ್‌ನಲ್ಲಿ ನಿಷೇಧಾಜ್ಞೆ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

'ಸಂಭಲ್‌ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ. ಹಾಗಾಗಿ ಸಂಭಲ್‌ಗೆ ರಾಹುಲ್ ಗಾಂಧಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ. ಗಾಜಿಪುರ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿಯಲಾಗಿದೆ' ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಹರಿಹರ ದೇಗುಲದ ಮೇಲೆ ಮೊಗಲ್ ದೊರೆಗಳು ಮಸೀದಿ ನಿರ್ಮಿಸಿದ್ದಾರೆ ಎಂಬ ಅರ್ಜಿಗೆ ಸಂಬಂಧಿಸಿದಂತೆ ಸಮೀಕ್ಷೆಗೆ ಆದೇಶಿಸಿದ ನ್ಯಾಯಾಲಯದ ಆದೇಶ ವಿರೋಧಿಸಿ ನ. 19ರಂದು ಸಂಭಲ್‌ನಲ್ಲಿ ಪ್ರತಿಭಟನೆ ನಡೆಯಿತು. ನ. 24ರಂದು ಶಾಹಿ ಜಾಮಾ ಮಸೀದಿಯಲ್ಲಿ ಎರಡನೇ ಸಮೀಕ್ಷೆ ನಡೆಸಲು ಮುಂದಾದ ಸಂದರ್ಭದಲ್ಲಿ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದುಕೊಂಡಿತು.

ಶಾಹಿ ಜಮಾ ಮಸೀದಿ ಎದುರು ಜಮಾಯಿಸಿದ ಪ್ರತಿಭಟನಕಾರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಸಂಭವಿಸಿತು. ಈ ಸಂದರ್ಭದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು.

ಗಾಜಿಪುರ ಗಡಿಯಲ್ಲಿ ಭಾರಿ ಭದ್ರತೆ ಏರ್ಪಡಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries