HEALTH TIPS

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಗೆ ಅತ್ಯಲ್ಪ ಪಿಂಚಣಿ: ಶೋಚನೀಯ ಎಂದ SC

 ನವದೆಹಲಿ: ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಗೆ ₹10 ಸಾವಿರದಿಂದ ₹15 ಸಾವಿರದಷ್ಟು ಅತ್ಯಲ್ಪ ನಿವೃತ್ತಿ ವೇತನ ನೀಡಲಾಗುತ್ತಿದೆ. ಇದು ಶೋಚನೀಯ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

'ನಿವೃತ್ತಿ ವೇತನ ನೀಡುವುದಕ್ಕೆ ಸಂಬಂಧಿಸಿ ಮಾನವೀಯತೆ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೇ ಹೊರತು ಕಾನೂನಾತ್ಮಕ ವಿಧಾನಕ್ಕೆ ಜೋತು ಬೀಳಬಾರದು' ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದೆ.


ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಿಗೆ ನೀಡಲಾಗುತ್ತಿರುವ ಪಿಂಚಣಿಯಲ್ಲಿ ವ್ಯತ್ಯಾಸವಿದೆ ಎಂಬ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಹಾಗೂ ಕೆ.ವಿ.ವಿಶ್ವನಾಥನ್ ಅವರು ಇದ್ದ ನ್ಯಾಯಪೀಠ ನಡೆಸಿತು.

'ಜಿಲ್ಲಾ ನ್ಯಾಯಾಲಯಗಳಿಂದ ಪದೋನ್ನತಿ ಹೊಂದಿ ಹೈಕೋರ್ಟ್‌ ನ್ಯಾಯಮೂರ್ತಿಗಳಾದವರನ್ನು ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿಸಿರುವುದೇ ಈ ಅತ್ಯಲ್ಪ ಪಿಂಚಣಿಗೆ ಕಾರಣಗಳಲ್ಲೊಂದು.

ಇನ್ನೊಂದೆಡೆ, ಹೈಕೋರ್ಟ್‌ಗೆ ನೇಮಕಗೊಂಡಿರುವ ಹಿರಿಯ ವಕೀಲರಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನ ಸಿಗುತ್ತಿದೆ. ಇದು ಪಿಂಚಣಿಯಲ್ಲಿನ ವ್ಯತ್ಯಾಸಕ್ಕೆ ಮತ್ತೊಂದು ಕಾರಣ.

ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್‌.ವೆಂಕಟರಮಣಿ, 'ಈ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಯತ್ನಿಸಲಿದೆ. ಈ ಕುರಿತ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಬೇಕು' ಎಂದು ಪೀಠಕ್ಕೆ ಮನವಿ ಮಾಡಿದರು.

'ಈ ವಿಷಯ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಿ. ಇದರಿಂದ ನಾವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ತಪ್ಪಲಿದೆ' ಎಂದ ಪೀಠ, ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries