ಛತ್ತೀಸಗಢ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಯಾದ ಪತ್ರಕರ್ತ ಮುಕೇಶ್ ಚಂದ್ರಕರ್ ಕುಟುಂಬಕ್ಕೆ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಜ.1 ರಂದು ಮುಕೇಶ್ ಚಂದ್ರಕರ್(33) ನಾಪತ್ತೆಯಾಗಿದ್ದರು, ಬಳಿಕ ಅವರ ಮೃತದೇಹ ಜ.3 ರಂದು ರಸ್ತೆ ಕಾಮಗಾರಿ ಗುತ್ತಿಗೆದಾರ ಸುರೇಶ್ ಚಂದ್ರಕರ್ ಎನ್ನುವವರ ಜಾಗದಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.
ತನಿಖೆ ನಡೆಸಿದ ಬಳಿಕ ಹತ್ಯೆಯ ರುವಾರಿ ಸುರೇಶ್‌ರನ್ನು ಜ.5 ರಂದು ಹೈದರಾಬಾದ್‌ನಲ್ಲಿ ಪೊಲೀಸರು ಬಂಧಿಸಿದ್ದರು.
ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಘೋಷಿಸಿದ ಬಳಿಕ, ಪತ್ರಕರ್ತರಿಗಾಗಿ ಕಟ್ಟಡವನ್ನು ನಿರ್ಮಿಸಿ ಅದಕ್ಕೆ ಮುಕೇಶ್ ಅವರ ಹೆಸರನ್ನು ನಾಮಕರಣ ಮಾಡಲಾಗುವುದು ಎಂದು ಭರವಸೆ ನೀಡಿದರು.