ಅಲಿಗಢ: ದಟ್ಟ ಮಂಜಿನಿಂದಆಗ್ರಾ-ದೆಹಲಿ ಎಕ್ಸ್‌ಪ್ರೆಸ್‌ವೇನ ತಪ್ಪಲ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡು ಸಂಭವಿಸಿದ ಅಪಘಾತದಲ್ಲಿ 100ಕ್ಕೂ ಹೆಚ್ಚು ಮೇಕೆಗಳು ಮೃತಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದರು.
ಕಡಿಮೆ ಗೋಚರತೆಯಿಂದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಮೂರು ಟ್ರಕ್ ಸೇರಿ ಒಟ್ಟು ಆರು ವಾಹನಗಳಿಗೆ ಹಾನಿಯಾಗಿವೆ. 230ಕ್ಕೂ ಹೆಚ್ಚು ಮೇಕೆಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಅಪಘಾತದಲ್ಲಿ ತೀವ್ರ ಹಾನಿಯಾಗಿದ್ದು, ಮೇಕೆಗಳು ಸಾವನ್ನಪ್ಪಿವೆ ಎಂದು ತಿಳಿಸಿದ್ದಾರೆ.
ಅಪಘಾತದಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಟ್ಟ ಮಂಜಿನಿಂದ ಮುಜಾಫರ್ ನಗರದಲ್ಲಿಯೂ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.