ನವದೆಹಲಿ: ಮಹಾಕುಂಭ ಮೇಳದಲ್ಲಿ 15 ಲಕ್ಷಕ್ಕೂ ಹೆಚ್ಚು ವಿದೇಶಿಯರು ಭಾಗವಹಿಸುವ ನೀರಿಕ್ಷೆ ಇದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭಾನುವಾರ ಹೇಳಿದರು.
ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವಾಲಯವು ಆಯುರ್ವೇದ ಚಿಕಿತ್ಸೆ, ಯೋಗ ಮತ್ತು ಪಂಚಕರ್ಮದಂತಹ ಸೌಲಭ್ಯಗಳನ್ನು ಒದಗಿಸಲು ಟೆಂಟ್‌ಗಳನ್ನು ಸ್ಥಾಪಿಸಿದೆ ಎಂದರು.
ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ 'ಕಲಾಗ್ರಾಮ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಾಕುಂಭ ಮೇಳ ವಿಶ್ವದ ಅತಿದೊಡ್ಡ ಜಾತ್ರೆಯಾಗಿದ್ದು ಇದು ಭಾರತದ ವೈವಿಧ್ಯತೆಯಲ್ಲಿ ಏಕತೆಯನ್ನು ಬಿಂಬಿಸುತ್ತದೆ ಎಂದರು.