ನವದೆಹಲಿ: ರಷ್ಯಾದ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿ ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ಭಾರತಕ್ಕೆ ರಷ್ಯಾ ಮಾಹಿತಿ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ.
ರಷ್ಯಾದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದಾರೆ ಎಂದು ಎಂಇಎ ತಿಳಿಸಿದೆ.
ರಷ್ಯಾದ ಸೇನೆಯಲ್ಲಿ 126 ಮಂದಿ ಭಾರತೀಯ ಪ್ರಜೆಗಳು ಕಾರ್ಯ ನಿರ್ವಹಿಸುತ್ತಿದ್ದರು. ಈ ಪೈಕಿ 96 ಜನ ರಷ್ಯಾದ ಸಶಸ್ತ್ರ ಪಡೆಗಳಿಂದ ಬಿಡುಗಡೆಗೊಂಡು ಭಾರತಕ್ಕೆ ಮರಳಿದ್ದಾರೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ 18 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಲ್ಲಿ ಉಳಿದಿದ್ದಾರೆ. ಅವರಲ್ಲಿ 16 ಮಂದಿ ಎಲ್ಲಿದ್ದಾರೆಂದು ತಿಳಿದಿಲ್ಲ. ರಷ್ಯಾದವರು ಅವರನ್ನು ನಾಪತ್ತೆಯಾದವರ ಪಟ್ಟಿಯಲ್ಲಿ ಸೇರಿಸಿದ್ದಾರೆ. ಉಳಿದಿರುವವರ ಶೀಘ್ರ ಬಿಡುಗಡೆ ಹಾಗೂ ವಾಪಸಾತಿಗೆ ನಾವು ಪ್ರಯತ್ನಿಸುತ್ತಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.