ಇಂಫಾಲ್: ಮ್ಯಾನ್ಮಾರ್ ದೇಶದ 26 ಪ್ರಜೆಗಳನ್ನು ಅವರ ದೇಶಕ್ಕೆ ಗಡೀಪಾರು ಮಾಡಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ಹೇಳಿದ್ದಾರೆ.
ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಮಣಿಪುರದ ಸರಂಧ್ರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದ ಮ್ಯಾನ್ಮಾರ್‌ನ 26 ಪ್ರಜೆಗಳನ್ನು ಇಂದು ಅವರ ತಾಯ್ನಾಡಿಗೆ ಗಡೀಪಾರು ಮಾಡಲಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಯುದ್ಧದಿಂದ ಪಲಾಯನ ಮಾಡುವವರಿಗೆ ಮಾನವೀಯ ನೆರವು ನೀಡುವ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ. ಅವರ ಬಗ್ಗೆ ಕಾಳಜಿ ಮತ್ತು ಗೌರವಯುತ ನಿರ್ಗಮನವನ್ನು ಖಚಿತಪಡಿಸುತ್ತದೆ ಎಂದಿದ್ದಾರೆ.
ಅಕ್ರಮ ವಲಸಿಗರು ಮಣಿಪುರದಲ್ಲಿ ಉಳಿಯಲು ಅವಕಾಶ ನೀಡದಿರುವ ಬಗ್ಗೆ ರಾಜ್ಯ ಸರ್ಕಾರವು ದೃಢವಾದ ನಿಲುವನ್ನು ಹೊಂದಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಗಡಿಯ ಮೊರೆಹ್ ಪಟ್ಟಣದ ಬಳಿ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪಡೆಗಳ ಪ್ರತಿನಿಧಿಗಳು ವಿದೇಶಿಯರನ್ನು ಮ್ಯಾನ್ಮಾರ್ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.