ಕೋಲ್ಕತ್ತ: ತಮಿಳುನಾಡಿನಲ್ಲಿ ₹1,000 ಕೋಟಿಯ ಸೈಬರ್ ವಂಚನೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು (ಗುರುವಾರ) ಪಶ್ಚಿಮ ಬಂಗಾಳದ 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲ್ಕತ್ತದ ಪಾರ್ಕ್ ಸ್ಟ್ರೀಟ್, ಸಾಲ್ಟ್ ಲೇಕ್ ಮತ್ತು ಬಾಗುಯಿಹಾಟೀ ಪ್ರದೇಶ ಸೇರಿದಂತೆ ಇತರ ಐದು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.
ಸಾಲ್ಟ್ ಲೇಕ್ ಪ್ರದೇಶದಲ್ಲಿ ನಡೆಸಿದ ದಾಳಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ವಿಚಾರಣೆಗಾಗಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೂರ್ವ ರಾಜ್ಯಗಳಲ್ಲಿ ನೆಲೆಸಿರುವ ಹಲವು ಜನರು ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.