ರಿಯಾದ್: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತದ ಒಂಬತ್ತು ಜನರು ಮೃತಪಟ್ಟಿದ್ದಾರೆ.
ಭಾರತೀಯರ ಸಾವಿನ ಬಗ್ಗೆ ಸೌದಿ ಅರೇಬಿಯಾದಲ್ಲಿರುವ ರಾಯಭಾರ ಕಚೇರಿ ಖಚಿತಪಡಿಸಿದೆ. ಅವರ ಕುಟುಂಬಗಳಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.
ಸೌದಿ ಅರೇಬಿಯಾದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ಅಪಘಾತ ಸಂಭವಿಸಿತ್ತು. ಮೃತರ ಭಾರತದ ಯಾವ ಭಾಗದವರು ಎಂಬ ಮಾಹಿತಿ ತಿಳಿದು ಬಂದಿಲ್ಲ.
ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ.