ಬೆಂಗಳೂರು: ಶುಕ್ರವಾರ ಚೆನ್ನೈನಿಂದ ಸಿಂಗಪುರಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಟೇಕ್ ಆಫ್ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಾಪಸ್ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುರಕ್ಷಿತ ಲ್ಯಾಂಡಿಂಗ್ ಆಗಿದೆ.
ಈ ವಿಮಾನದಲ್ಲಿ 170 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಇಂದು ಬೆಳಿಗ್ಗೆ ಟೇಕ್ ಆಫ್ ಆದ ನಂತರ ಮಾರ್ಗಮಧ್ಯ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದನ್ನು ಅರಿತ ಪೈಲಟ್, ವಾಪಸ್ ವಿಮಾನವನ್ನು ಚೆನ್ನೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತ ಲ್ಯಾಂಡಿಂಗ್ ಮಾಡಿಸಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಏರ್ ಇಂಡಿಯಾ ಎಂಜಿನಿಯರ್‌ಗಳು ತಾಂತ್ರಿಕ ದೋಷ ಕಾಣಿಸಿಕೊಂಡ ವಿಮಾನವನ್ನು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ವಿಮಾನ ಹಾರಾಟ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.