HEALTH TIPS

Assam Mining Tragedy: 5ನೇ ದಿನದ ಕಾರ್ಯಾಚರಣೆಯಲ್ಲಿ ಮತ್ತೊಂದು ಮೃತದೇಹ ಪತ್ತೆ

ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ್ದ ಒಂಬತ್ತು ಕಾರ್ಮಿಕರ ಪೈಕಿ ಶನಿವಾರ ಮತ್ತೊಬ್ಬನ ಮೃತದೇಹವನ್ನು ಹೊರತೆಗೆಯಲಾಗಿದೆ.

ಕಳೆದ ಐದು ದಿನಗಳಿಂದ ಸೇನೆ, ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ಬುಧವಾರ ಒಬ್ಬರ ಹಾಗೂ ಇಂದು (ಶನಿವಾರ) ಮತ್ತೊಬ್ಬರ ಮೃತದೇಹ ಹೊರತೆಗೆಯಲಾಗಿದೆ. ಗಣಿಯಲ್ಲಿ ಸಿಲುಕಿದ್ದ 9 ಕಾರ್ಮಿಕರ ಪೈಕಿ ಇಲ್ಲಿಯವರೆಗೆ ಇಬ್ಬರ ಶವಗಳು ಸಿಕ್ಕಿವೆ.

ಕಲ್ಲಿದ್ದಲು ಗಣಿ ದುರಂತದಲ್ಲಿ ಸಿಲುಕಿಕೊಂಡಿರುವ ಉಳಿದ ಏಳು ಮಂದಿಯ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಅವರು ಬದುಕುಳಿದಿರುವ ಸಾಧ್ಯತೆ ತೀರ ಕಡಿಮೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಉಮರಂಗಸೊದ 3 ಕಿ.ಮೀ. ಪ್ರದೇಶದಲ್ಲಿ ಸ್ಥಿತಗೊಂಡಿರುವ ಸ್ಥಳೀಯ ಕಲ್ಲಿದ್ದಲು ಗಣಿಯಲ್ಲಿ ಹಠಾತ್ ನೀರು ತುಂಬಿಕೊಂಡ ಪರಿಣಾಮ ಕಾರ್ಮಿಕರು ಸಿಲುಕಿಕೊಂಡಿದ್ದರು.

ರಕ್ಷಣಾ ತಂಡಗಳು ಗಣಿಯೊಳಗೆ ಸಮರೋಪಾದಿಯಲ್ಲಿ ದಿನದ 24 ಗಂಟೆಯೂ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries