HEALTH TIPS

ಕೇಂದ್ರದಿಂದ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಕಾಯ್ದೆಯ ಕರಡು ಬಿಡುಗಡೆ

ನವದೆಹಲಿ: ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಕಾಯ್ದೆಯ ಬಹುನಿರೀಕ್ಷಿತ ಕರಡನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಆದರೆ ಕಾನೂನು ಉಲ್ಲಂಘಿಸುವವರಿಗೆ ದಂಡ ವಿಧಿಸುವ ಕುರಿತು ಯಾವುದೇ ಉಲ್ಲೇಖವಿಲ್ಲ.

ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಈ ಕರಡು ಬಿಡುಗಡೆ ಮಾಡಲಾಗಿದ್ದು, ಶಿಫಾರಸುಗಳನ್ನು ಪರಿಗಣಿಸಿ ಫೆಬ್ರವರಿ 18ರ ನಂತರ ತಿದ್ದುಪಡಿ ಕಾಯ್ದೆ ಅಂತಿಮ ಸ್ವರೂಪ ಪಡೆಯಲಿದೆ.

"ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್, 2023(22 ರ 2023)ರ ಉಪ ನಿಬಂಧನೆ(1) ಮತ್ತು (2) ಅನ್ವಯ ಕೇಂದ್ರ ಸರ್ಕಾರ ತನ್ನ ಹಕ್ಕುಗಳನ್ನು ಚಲಾಯಿಸಿ ಕರಡನ್ನು ಪರಿಚಯಿಸಿದೆ. 2023ರಲ್ಲಿ ಹಾಗೂ ನಂತರದಲ್ಲಿ ಈ ಕಾಯ್ದೆ ವ್ಯಾಪ್ತಿಗೆ ಒಳಪಡಬಹುದಾದ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ ಇದನ್ನು ಪರಿಚಯಿಸಲಾಗುತ್ತಿದೆ" ಎಂದು ಕರಡು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

"... ಹೇಳಿದ ಕರಡು ನಿಯಮಗಳನ್ನು ಫೆಬ್ರವರಿ 18, 2025 ರ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಈ ಮೂಲಕ ಸೂಚನೆ ನೀಡಲಾಗಿದೆ" ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಕಾಯ್ದೆಯ ಈ ಕರಡಿನಲ್ಲಿ 2023ರ ಅಡಿಯಲ್ಲಿ ಅನುಮೋದಿಸಲಾದ ದಂಡಗಳ ಬಗ್ಗೆ ಯಾವುದೇ ಉಲ್ಲೇಖ ಇಲ್ಲ. ಆದರೆ ಮೂಲ ಕಾಯ್ದೆಯಲ್ಲಿ ವೈಯಕ್ತಿಕ ಮಾಹಿತಿ ಗೌಪ್ಯತೆ ಮತ್ತು ಸುರಕ್ಷಿತವಾಗಿಡುವ ಹೊಣೆ ಹೊತ್ತವರು ಅದನ್ನು ಸರಿಯಾಗಿ ನಿಭಾಯಿಸದಿದ್ದರೆ 250 ಕೋಟಿ ರೂ.ಗಳವರೆಗೆ ದಂಡ ವಿಧಿಸಲು ಅವಕಾಶ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries