ತಿರುವನಂತಪುರಂ: ಕರ್ನಾಟಕಕ್ಕೆ ಕೆಎಸ್‌ಆರ್‌ಟಿಸಿ ಸೇವೆಗಳ ಟಿಕೆಟ್ ದರ ಹೆಚ್ಚಳಗೊಳಿಸಲಾಗಿದೆ. ದರ ಏರಿಕೆ ಇಂದಿನಿಂದ ಜಾರಿಗೆ ಬಂದಿದೆ. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಟಿಕೆಟ್ ದರವನ್ನು ಹೆಚ್ಚಿಸಿದೆ.ಬಳಿಕ ಇದೀಗ ಕೇರಳವೂ ಹೆಚ್ಚಿಸಲು ನಿರ್ದ್ಧರಿಸಿತು. ಅಂತರರಾಜ್ಯ ಒಪ್ಪಂದದ ಪ್ರಕಾರ ಎರಡು ರಾಜ್ಯಗಳ ನಡುವೆ ಟಿಕೆಟ್ ದರ ಏಕರೂಪವಾಗಿರಬೇಕು ಎಂದು ಒಪ್ಪಂದವಾಗಿದೆ.
ಕರ್ನಾಟಕ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲು ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂಧನ ಬೆಲೆ, ನೌಕರರ ವೇತನ ಹೆಚ್ಚಳ ಸೇರಿದಂತೆ ನಿರ್ವಹಣಾ ವೆಚ್ಚದಲ್ಲಿ ಗಣನೀಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕಕ್ಕೆ ಕೆಎಸ್‌ಆರ್‌ಟಿಸಿ ಟಿಕೆಟ್ ದರ ಏರಿಕೆ
0
ಜನವರಿ 05, 2025
Tags