ವಿರುಧುನಗರ: ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 6 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುಧುನಗರದಲ್ಲಿ ಶನಿವಾರ ನಡೆದಿದೆ.
ಕಾರ್ಮಿಕರು ಬೆಳಿಗ್ಗೆ ರಾಸಾಯನಿಕಗಳ ಮಿಶ್ರಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ನಾಲ್ವರು ಪುರುಷ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಕಾರ್ಖಾನೆಯ ನಾಲ್ಕು ಕೊಠಡಿಗಳು ನೆಲಸಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಅವರನ್ನು ಮಧುರೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ ₹4 ಲಕ್ಷ ಮತ್ತು ಗಾಯಗೊಂಡವರಿಗೆ 1 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡುವಂತೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಆದೇಶಿಸಿದ್ದಾರೆ.