ಇಂಫಾಲ: ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ಮಣಿಪುರದ ಕಾಕ್ಚಿಂಗ್ ಜಿಲ್ಲೆಯಲ್ಲಿ ನಿಷೇಧಿತ ಉಗ್ರಗಾಮಿ ಸಂಘಟನೆ ಕಂಗ್ಲೇಪಕ್ ಕಮ್ಯುನಿಸ್ಟ್ ಪಾರ್ಟಿಯ(ತೈಬಂಗಾನ್ಬಾ) ಇಬ್ಬರು ಉಗ್ರರನ್ನು ಭದ್ರತಾ ಪಡೆ ಅಧಿಕಾರಿಗಳು ಬಂಧಿಸಿದ್ದಾರೆ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಕಾಕ್ಚಿಂಗ್ ಜಿಲ್ಲೆಯ ಸುಗ್ನು, ಚೈರೆಲ್ ಮತ್ತು ಕಾಕ್ಚಿಂಗ್ ಖುನೌ ಪ್ರದೇಶದಲ್ಲಿ ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದರು. ಭದ್ರತಾ ಪಡೆ ಅಧಿಕಾರಿಗಳು ಉಗ್ರರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಈ ಇಬ್ಬರೂ ಸಿಕ್ಕಿಬಿದ್ದಿದ್ದಾರೆ.
ಬಂಧಿತರಿಂದ ಮದ್ದುಗುಂಡುಗಳು, ಅತ್ಯಾಧುನಿಕ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.