ಉಪ್ಪಳ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಸಂಹಿತ ಎಂ. ಶೇ.87 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.
ಈಕೆ ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ನಿರ್ದೇಶಕಿಯಾದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಅವರ ಶಿಷ್ಯೆಯಾಗಿದ್ದು , ಬಾಯಾರಿನ ಛಾಯಾಗ್ರಾಹಕ ರಾಮಕೃಷ್ಣ ಭಟ್ ಹಾಗೂ ವೇದ ದಂಪತಿಯ ಪುತ್ರಿ. ಪ್ರಸ್ತುತ ಪುತ್ತೂರಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ.