ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಸಲಹೆಗಾರನನ್ನು ಗುರುವಾರ ವಜಾಗೊಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ವೇತನ ಹೆಚ್ಚಳದ ಬಗ್ಗೆ ತಪ್ಪಾಗಿ ಪೋಸ್ಟ್ ಪ್ರಕಟಿಸಿದ್ದಕ್ಕೆ ತಮ್ಮ ಸಾಮಾಜಿಕ ಮಾಧ್ಯಮ ಸಲಹೆಗಾರನನ್ನು ವಜಾ ಮಾಡಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳ ವೇತನ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದನ್ನು ಪರಿಶೀಲನೆ ಮಾಡದೇ ಮಾಧ್ಯಮ ಸಲಹೆಗಾರನು ಪೊಲೀಸ್ ಅಧಿಕಾರಿಗಳ ವೇತನವನ್ನು ಹೆಚ್ಚಳ ಮಾಡಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ತಕ್ಷಣಕ್ಕೆ ಆ ಪೋಸ್ಟ್ ಅಳಿಸಿ ಹಾಕಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.