ಲಂಡನ್: ವಾಯವ್ಯ ಇಂಗ್ಲೆಂಡ್‌ನ ಗ್ರೇಟರ್ ಮ್ಯಾಂಚೆಸ್ಟರ್‌ನ ರಾಯಲ್ ಓಲ್ಡ್‌ಹ್ಯಾಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ನರ್ಸ್‌ಗೆ ಕತ್ತರಿಯಿಂದ ಇರಿಯಲಾಗಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಅಚಮ್ಮ ಚೆರಿಯನ್ ಅವರು ಚಿಕಿತ್ಸೆಗೆ ದಾಖಲಾಗಿದ್ದು, ಜೀವನ್ಮರಣದ ಹೋರಾಟ ನಡೆಸಿದ್ದಾರೆ.
ಕೊಲೆ ಯತ್ನ ನಡೆಸಿದ ಆರೋಪದ ಮೇಲೆ ರುಮನ್ ಹಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ತಿಳಿಸಿದ್ದಾರೆ.