ಬರಿಪಾದ: ಒಡಿಶಾದ ಮಯೂರಭಂಜ್ ಜಿಲ್ಲೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಆನೆಯ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯು ದದ್ದೂರ್ ಗ್ರಾಮದಲ್ಲಿ ನಡೆದಿದೆ. ಬರಿಪಾದ ಸಾದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯನ್ನು ಮಧುಸೂದನ್ ಪಾಂಡೇ ಎಂದು ಗುರುತಿಸಲಾಗಿದೆ. ಇವರು ದಾಳಿ ಸಂದರ್ಭದಲ್ಲಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದರು.
ಆನೆದಾಳಿಯಿಂದ ಗಾಯಗೊಂಡ ಪಾಂಡೇ ಅವರನ್ನು ತಕ್ಷಣ ಪಿಆರ್‌ಎಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆ ಹೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಿದ್ದಾರೆ.
ಬರಿಪಾದಾ ಅರಣ್ಯ ವಿಭಾಗದ ಶ್ಯಾಮಖುಂಟ ಘಟಕ ವ್ಯಾಪ್ತಿಯ ಸಿಮಿಲಿಪಾಲ ರಾಷ್ಟ್ರೀಯ ಉದ್ಯಾನ ಪ್ರದೇಶ ವ್ಯಾಪ್ತಿಯಲ್ಲಿ 30 ಆನೆಗಳ ಹಿಂಡು ಓಡಾಡುತ್ತಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.