ಮುಳ್ಳೇರಿಯ: ಬೆಳ್ಳೂರು ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮ ಕಲಶ ಸಮಿತಿ ರಚನೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಮರ್ಪಣಾ ಕಾರ್ಯಕ್ರಮ ಶ್ರೀ ಕ್ಷೇತ್ರ ಸಭಾಂಗಣದಲ್ಲಿ ಜರಗಿತು.
ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದ ಸ್ವಾಮೀಜಿ, ನಿಧಿ ಕುಂಭಕ್ಕೆ ಚಾಲನೆ ನೀಡಿದರು. ವಕೀಲ ದಾಮೋದರ ಎಂ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟರು ದಿಕ್ಸೂಚಿ ಭಾಷಣ ªಮಾಡಿದರು. ಬ್ರಹ್ಮಕಲಶ ಹಾಗೂ ಜೀರ್ಣೋದ್ಧಾರ ಸಮಿತಿಗಳನ್ನು ರಚಿಸಲಾಯಿತು. ವಸಂತ ಪೈ ಬದಿಯಡ್ಕ ಅವರನ್ನು ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಲಶ ಸಮಿತಿಯ ಗೌರವಾಧ್ಯಕ್ಷರಾಗಿಯೂ, ಮಧುಸೂದನ ಆಯರ್ ಮಂಗಳೂರು ಇವರನ್ನು ಅಧ್ಯಕ್ಷರಾಗಿಯೂ ಆಯ್ಕೆ ಮಾಡಲಾಯಿತು. ಕಾರ್ಯಾಧ್ಯಕ್ಷರಾಗಿ ವಕೀಲ ದಾಮೋದರ ಎಂ, ಪ್ರಧಾನ ಕಾರ್ಯದರ್ಶಿಯಾಗಿ ವಕೀಲ ಶಿವರಾಮ, ಕೋಶಾಧಿಕಾರಿಯಾಗಿ ನಾರಾಯಣ ಕೇಕಡ್ಕ, ಕಾರ್ಯದರ್ಶಿಯಾಗಿ ಜಯಕರ ಎಂ ಮಿಂಚಿಪದವು ಅವರನ್ನು ಆಯ್ಕೆ ಮಾಡಲಾಯಿತು.
ಚಿದಾನಂದ ಕೆದಿಲಾಯ, ಸೇವಾ ಸಮಿತಿಯ ಸದಾನಂದ ಅಡ್ಕ, ಚಂದ್ರಶೇಖರ ಎಂ ಎನ್, ರಾಘವ ಎಂ ಎನ್, ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು. ನ್ಯಾಯವಾದಿ ಶಿವರಾಮ ಮಣಿಯಾಣಿ ಸ್ವಾಗತಿಸಿದರು. ಗಂಗಾಧರ ಕೊಂಡೆಯೂರು ಕಾರ್ಯಕ್ರಮ ನಿರೂಪಿಸಿದರು. ಮನೋಜ್ ಎಂ ಸಿ ವಂದಿಸಿದರು.