ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ಹೈಯರ್ ಸೆಕೆಂಡರಿ ಶಾಲೆಯೊಂದರ ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅದೇ ಶಾಲೆಯ ಪ್ಲಸ್‍ವನ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈತನ ವಿರುದ್ಧ ಪೊಲೀಸರು ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿದೆ. ಈ ಮಧ್ಯೆ ಬಾಲಕಿಗೆ ಕಿರುಕುಳ ನೀಡಿದ್ದ ಈತ ನಂತರ ಈಕೆಯಿಂದ ದೂರಾಗಿದ್ದನು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ವೈದ್ಯಕೀಯ ತಪಾಸಣೆಯಿಂದ ವಿದ್ಯಾರ್ಥಿನಿ ಮೇಳಿನ ಲೈಂಗಿಕ ದೌರ್ಜನ್ಯ ಬಹಿರಂಗಗೊಂಡಿತ್ತು.