ಜೈಪುರ: ರಾಜಸ್ಥಾನದಲ್ಲಿ ಡಿಸೆಂಬರ್ 23ರಂದು ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿಯನ್ನು ಕೊನೆಗೂ ಸತತ 10 ದಿನಗಳ ಕಾರ್ಯಾಚರಣೆಯಲ್ಲಿ ಜೀವಂತವಾಗಿ ಹೊರತೆರೆಯಲಾಗಿದೆ.
ಅಂದು ರಾಜಸ್ಥಾನದ ಕೋಟಪುಟ್ಲಿ-ಬಹರೋಡ್ ಜಿಲ್ಲೆಯ ಕಿರಾತ್‌ಪುರ ಎಂಬಲ್ಲಿ ಚೇತನಾ ಎಂಬ ಮೂರು ವರ್ಷದ ಬಾಲಕಿ ಸುಮಾರು 150 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಆಕಸ್ಮಿಕವಾಗಿ ಬಿದ್ದಿದ್ದಳು.
ಸದ್ಯ ಬಾಲಕಿಯ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಜಿಲ್ಲಾಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಘಟಕದ ಐಸಿಯುಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಜಿಲ್ಲಾಧಿಕಾರಿ ಕಲ್ಪನಾ ಅಗರವಾಲ್ ತಿಳಿಸಿದ್ದಾರೆ.
'ತಜ್ಞರ ಮಾರ್ಗದರ್ಶನ ಪಡೆದು ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಎನ್‌ಡಿಆರ್‌ಎಫ್ ಸಿಬ್ಬಂದಿಯ ಶ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
'ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯಲಾಗಿತ್ತು. ಈ ನಡುವೆ ಸುರಿದ ಮಳೆಯು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿತ್ತು. ಬಂಡೆಯನ್ನು ಒಡೆಯುವುದು ಸವಾಲಾಗಿತ್ತು. ಇದು ರಾಜ್ಯದಲ್ಲಿ ಎದುರಾದ ಅತ್ಯಂತ ಕಠಿಣ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.