ತಿರುವನಂತಪುರ: ಪ್ರಪಂಚದಲ್ಲಿ ಸುಮಾರು 160 ಕೋಟಿ ಜನರು ಅರಣ್ಯವನ್ನು ಅವಲಂಬಿಸಿ ಜೀವನ ನಡೆಸುತ್ತಿದ್ದಾರೆ, ಆದ್ದರಿಂದ ಅರಣ್ಯ ಸಂರಕ್ಷಣೆ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಅರಣ್ಯ ಕೇಂದ್ರದಲ್ಲಿ ನಡೆದ ವನ ಪದಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮುಂಬರುವ ವರ್ಷಗಳಲ್ಲಿ ಪೋಲೀಸ್ ಅಬಕಾರಿ ಅಗ್ನಿಶಾಮಕ ಪಡೆಗಳ ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯಂದು ಅರಣ್ಯ ಪದಕಗಳನ್ನು ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಅರಣ್ಯ ಸಚಿವ ಎ.ಕೆ.ಶಶೀಂದ್ರನ್ ಅಧ್ಯಕ್ಷತೆ ವಹಿಸಿದ್ದರು. ಅರಣ್ಯ ಇಲಾಖೆಯು ಜನರ ಸಹಭಾಗಿತ್ವದಲ್ಲಿ ಕಾರ್ಯಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಜನಜೀವನವನ್ನು ನಿರಾಯಾಸವಾಗಿಸಲು ಇಲಾಖೆ ಮಹತ್ವ ನೀಡುತ್ತಿದೆ ಎಂದು ಸಚಿವರು ಹೇಳಿದರು.