ಕಾಸರಗೋಡು: ಯಕ್ಷಗಾನ ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷÀಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದ ಯಕ್ಷಗಾನ ಕಲೆಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಕೊಡುಗೆ ಅಪಾರವಾಗಿದೆ ಎಂದು ಯಕ್ಷಗಾನ ಗುರು ಜಯರಾಮ ಪಾಟಾಳಿ ಪಡುಮಲೆ ತಿಳಿಸಿದರು.
ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ನೇತೃತ್ವದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಕಾರದೊಂದಿಗೆ ನಡೆಯುವ ಯಕ್ಷಗಾನ ತರಬೇತಿ ಶಿಬಿರದ ಶನಿವಾರ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪತ್ರಕರ್ತ, ಯಕ್ಷಗಾನ ಕಲಾವಿದ ಪುರುಷೋತ್ತಮ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು
ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಯಕ್ಷಗಾನ ಕಲಾವಿದೆ ಪ್ರಮೀಳ ವಂದಿಸಿದರು.