ಮುಂಬೈ: ನಟ ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ ಆರೋಪಿಯು ಬಾಂಗ್ಲಾದೇಶದ ಪ್ರಜೆಯಾಗಿದ್ದು, ಭಾರತಕ್ಕೆ ಬಂದ ಬಳಿಕ ಹೆಸರು ಬದಲಾಯಿಸಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದರು.
ಪ್ರಕರಣ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಪಿ ದೀಕ್ಷಿತ್ ಗೆಡಂ, ಆರೋಪಿಯನ್ನು ಮುಂಬೈನ ಠಾಣೆ ನಗರದಲ್ಲಿ ವಶಕ್ಕೆ ಪಡೆಯಲಾಗಿದ್ದು, ಆರೋಪ ಎಸಗಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.
'ಆರೋಪಿಯು ಬಾಂಗ್ಲಾದೇಶದವನಾಗಿದ್ದು, ಭಾರತಕ್ಕೆ ಬಂದ ನಂತರ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂಬ ತನ್ನ ಹೆಸರನ್ನು 'ಬಿಜೋಯ್ ದಾಸ್' ಎಂದು ಬದಲಾಯಿಸಿಕೊಂಡಿದ್ದಾನೆ' ಎಂದು ಹೇಳಿದರು.
ಬುಧವಾರ ತಡರಾತ್ರಿ ಸೈಫ್ ಅವರ ನಿವಾಸಕ್ಕೆ ನುಗ್ಗಿದ್ದ ಆರೋಪಿಯು ಅವರ ಮೇಲೆ ಹಲ್ಲೆ ನಡೆಸಿದ್ದನು. ಘಟನೆಯಲ್ಲಿ ಸೈಫ್ ಅವರ ಕುತ್ತಿಗೆ ಮತ್ತು ಬೆನ್ನಿಗೆ ತೀವ್ರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದು, ಇದೀಗ ಅವರು ಚೇತರಿಸಿಕೊಂಡಿದ್ದಾರೆ.