ಕಾಸರಗೋಡು: ನೀಲೇಶ್ವರ ನಗರಸಭಾ ಅಧ್ಯಕ್ಷೆ ಟಿ.ವಿ ಶಾಂತಾ ಅವರ ಪತಿ ಪೋಡೋಂತುರುತ್ತಿ ನಿವಾಸಿ ಕುಞÂಕಣ್ಣನ್(72)ಅವರ ಮೃತದೇಹ ಮನೆ ಸನಿಹದ ತೇಜಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ವ್ಯಕ್ತಿಒಯೊಬ್ಬರು ತೇಜಸ್ವಿನಿ ಹೊಳೆಗೆ ಬಿದ್ದಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ವ್ಯಕ್ತಿಯನ್ನು ಮೇಲಕ್ಕೆತ್ತಿ ನೀಲೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ನೀಲೇಶ್ವರ ಠಾಣೆ ಪೊಲೀಸರು ಅಸಹಜ ಸವಿನ ಬಗ್ಗೆ ಕೇಸು ದಾಖಲಿಸಿಕೊಂಡಿದ್ದಾರೆ.