HEALTH TIPS

ಮೀಯಪದವು ವಿದ್ಯಾವರ್ದಕ ಎಯುಪಿ ಶಾಲೆ ವಾರ್ಷಿಕೋತ್ಸವ

Top Post Ad

Click to join Samarasasudhi Official Whatsapp Group

Qries

ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎಯುಪಿ ಶಾಲಾ ವಾರ್ಷಿಕೋತ್ಸವವು ಇತ್ತೀಚೆಗೆ ಶಾಲಾ ರಾಮಕೃಷ್ಣ ರಾವ್ ಸಭಾಂಗಣದಲ್ಲಿ  ಜರಗಿತು. ಬೆಳಗ್ಗೆ 9.30ಕ್ಕೆ ಶಾಲಾ ಸಂಚಾಲಕಿ ರಾಜೇಶ್ವರಿ ಎಸ್ ರಾವ್ ಅವರು ಧ್ವಜಾರೋಹಣಗೈದು ಚಾಲನೆ ನೀಡಿದರು. 

ಬಳಿಕ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರಾರಂಭಗೊಂಡಿತು. ಅಪರಾಹ್ನ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ರಾಜಗೋಪಾಲ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರಿನ ನಿವೃತ್ತ ಹೆಚ್ಚುವರಿ ನಿರ್ದೇಶಕ ಡಾ.ಗಿರಿಧರ್ ರಾವ್ ಹಾಗೂ ಮಂಜೇಶ್ವರ ಬಿ ಆರ್ ಸಿ ಕ್ಷೇತ್ರ ನಿರೂಪಣಾಧಿಕಾರಿ ಜೋಯ್ ಜಿ ಉಪಸ್ಥಿತರಿದ್ದು ಶುಭಹಾರೈಸಿದರು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಶಾಲಾ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ಟಿ ತಿರುಮಲೇಶ್ವರ ಭಟ್ ಅವರನ್ನು ಗೌರವಿಸಲಾಯಿತು. ಸನ್ಮಾನಿತರ ಪರಿಚಯವನ್ನು ಶಾಲಾ ಅಧ್ಯಾಪಕÀ ಹರೀಶ್ ಸುಲಾಯ ಒಡ್ಡoಬೆಟ್ಟು ವಾಚಿಸಿದರು. ಸನ್ಮಾನಿತರು ತಮ್ಮ ಶಾಲಾ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು. ವಾರ್ಷಿಕೋತ್ಸವದ ಅಂಗವಾಗಿ ನಡೆಸಿದ ಸ್ಪರ್ಧೆಗಳ ಬಹುಮಾನಗಳನ್ನು ಹಾಗೂ ಪ್ರತೀ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಳೆದ ವರ್ಷ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ದಿ.ಗೋಪಾಲಕೃಷ್ಣ ರಾವ್ ಸ್ಮರಣಾರ್ಥ ಹಾಗೂ ದಿ ದುಗ್ಗಣ್ಣ ಭಟ್ ಸ್ಮರಣಾರ್ಥ ನೀಡುವ ಧನಸಹಾಯವನ್ನು ನೀಡಲಾಯಿತು. . ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್ ಎಮ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ವಿನಯ ಕೃಷ್ಣ ಅಧ್ಯಾಪಕ ಬಾಲಕೃಷ್ಣ.ಎಂ ನಿರೂಪಿಸಿದರು. ಅಧ್ಯಾಪಿಕೆ ಪದ್ಮಾವತಿ ಎಂ ವಂದಿಸಿದರು. 

ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿದವು. ಮಕ್ಕಳಿಂದ ಕೌನ್ಸಿಲರ್ ಕೊಗ್ಗಣ್ಣೆ ತುಳು ಹಾಸ್ಯಮಯ ನಾಟಕ ಹಾಗೂ ಶ್ರೀ ಕೃಷ್ಣ ಲೀಲೆ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.ಸಾಂಸ್ಕೃತಿಕ ಕಾರ್ಯಕ್ರಮವನ್ನು ರಾಮಚಂದ್ರ ಕೆ ಎಂ, ಸುನಿಲ್ ಕುಮಾರ್ ಹಾಗೂ ವಿದ್ಯಾರ್ಥಿಗಳು ನಿರ್ವಹಿಸಿದರು.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries