ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶಾಬಿಷೇಕ, ಕ್ಷೇತ್ರದ ವರ್ಷಾವಧಿ ಉತ್ಸವವು ಫೆ 2ರಿಂದ 16ರ ತನಕ ನಡೆಯಲಿದ್ದು, ಇದರಂಗವಾಗಿ ಚಪ್ಪರ ಮುಹೂರ್ತ ಗುರುವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ, ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ, ಬ್ರಹ್ಮಕಲಶ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ತರ್ ನಾರಂಪಾಡಿ, ಕೋಶಾಧಿಕಾರಿ ಸೀತಾರಾಮ ಮಾಸ್ತರ್, ಕಾರ್ಯದರ್ಶಿ ಕೃಷ್ಣಮೂರ್ತಿ ಎಡಪ್ಪಾಡಿ, ರವೀಂದ್ರ ರೈ ಗೋಸಾಡ, ದೇವರಾಜ ಭಂಡಾರಿ, ಸತ್ಯ ಗೋಪಾಲ, ಕೊಟ್ಟ ಬೆಳ್ಟಪ್ಪಾಡ ಮತ್ತಿತರರು ಉಪಸ್ಥಿತರಿದ್ದರು.