ಕುಂಬಳೆ: ಬಿಜೆಪಿ ಕುಂಬಳೆ ಉತ್ತರ ವಲಯ ಅಧ್ಯಕ್ಷ ಪ್ರದೀಪ್ ಬಂಬ್ರಾಣ ಅವರ ಮನೆಗೆ ಮಧ್ಯರಾತ್ರಿ ಅಬಕಾರಿ ತಂಡ ನುಗ್ಗಿ ಮನೆಯನ್ನು ನಾಶಗೊಳಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ನೇತೃತ್ವದಲ್ಲಿ ಕುಂಬಳೆ ಅಬಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಬಿಜೆಪಿ ಕುಂಬಳೆ ದಕ್ಷಿಣ ವಲಯ ಅಧ್ಯಕ್ಷ ಸುಜಿತ್ ರೈ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಉದ್ಘಾಟಿಸಿದರು. ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯ ವಿ. ರವೀಂದ್ರನ್, ಬಿಜೆಪಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್ ಕುಮಾರ್ ಮಾತನಾಡಿದರು. ರಾಜ್ಯ ಸಮಿತಿ ಸದಸ್ಯರಾದ ಕೋಳಾರ್ ಸತೀಶ್ಚಂದ್ರ ಭಂಡಾರಿ, ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ ಮಯ್ಯ, ಕಾರ್ಯದರ್ಶಿ ಸುಧಾಕರ ಕಾಮತ್, ಯುವ ಮೋರ್ಚಾ ಮಂಡಲ ಅಧ್ಯಕ್ಷ ಅವಿನಾಶ್ ಕಾರಂತ್, ಒಬಿಸಿ ಮೋರ್ಚಾ ಮಂಡಲ ಅಧ್ಯಕ್ಷ ಮಹೇಶ್ ಪುಣಿಯೂರು, ಯುವ ಮೋರ್ಚಾ ಪಂಚಾಯತ್ ಸಮಿತಿ ಅಧ್ಯಕ್ಷ ಅಜಿತ್ ಕುಂಬಳೆ ಮಾತನಾಡಿದರು. ಪಂಚಾಯತ್ ಸದಸ್ಯರುಗಳಾದ ಪ್ರೇಮಲತಾ ಘಟ್ಟಿ, ಮೋಹನ್, ಪ್ರೇಮಾ ಶೆಟ್ಟಿ, ವಿವೇಕಾನಂದ ನೇತೃತ್ವ ವಹಿಸಿದ್ದರು.