ಸಮರಸ ಚಿತ್ರಸುದ್ದಿ: ಕಾಸರಗೋಡು: ನಗರದ ನೆಲ್ಲಿಕುಂಜೆಯ ಬಾಲಕಿಯರ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ವರ್ಷಪೂರ್ತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಡಂಗುರ ಮೆರವಣಿಗೆ ಗುರುವಾರ ಕಾಸರಗೋಡು ನಗರದಲ್ಲಿ ಜರುಗಿತು. ಪಿಲಿಕುಂಜೆಯಿಂದ ಆರಂಭವಾದ ಮೆರವಣಿಗೆಗೆ ಸ್ಮರಣಸಂಚಕೆ ಸಮಿತಿ ಅಧ್ಯಕ್ಷ ಕೆ.ಎಂ.ಹನೀಫ್ ಧ್ವಜ ತೋರಿಸುವ ಮೂಲಕ ಉದ್ಘಾಟಿಸಿದರು. ಚೆಮ್ನಾಡು ಮಹಿಳಾ ಒಕ್ಕೂಟದ ಚೆಂಡೆಮೇಳ, ಮುತ್ತುಕೊಡೆ, ಶಾಲಾ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು, ಪೆÇೀಷಕರು ಹಾಗೂ ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.