ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕಾಸರಗೋಡು ಜಿಲ್ಲಾ ಘಟಕ ವತಿಯಿಂದ ಮುಷ್ಕರ ಘೋಷಣಾ ಸಮಾವೇಶ ಕಾಸರಗೋಡಿನಲ್ಲಿ ಆಯೋಜಿಸಲಾಯಿತು. ಸಂಘಟನೆ ರಾಜ್ಯಾಧ್ಯಕ್ಷ ರಾಜು ಅಪ್ಸರಾ ಸಮಾರಂಭ ಉದ್ಘಾಟಿಸಿದರು.
ಜಿಲ್ಲಾಧ್ಯಕ್ಷ ಕೆ. ಅಹ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಸ್ಯಮೇಚೇರಿ, ರಾಜ್ಯ ಉಪಾಧ್ಯಕ್ಷರಾದ ಬಾಬು ಕೋಟಾಯಿಲ್, ಪಿ. ಕೆ. ಬಾಪುಹಾಜಿ, ಜಿಲ್ಲಾ ಕೋಶಾಧಿಕಾರಿ ಮಾಹಿನ್ ಕೋಳಿಕ್ಕರ, ಜಿಲ್ಲಾ ಉಪಾಧ್ಯಕ್ಷ ಪಿ. ಪಿ. ಮುಸ್ತಫಾ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಖಾ ಮೋಹನದಾಸ್, ಯುವ ಘಟಕದ ಜಿಲ್ಲಾಧ್ಯಕ್ಷ ಕೆ. ಸತ್ಯಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭ ವಯನಾಡ್ ರಿಲೀಫ್ ಫಂಡ್‍ಗೆ ರಾಜ್ಯದಲ್ಲೇ ಅತ್ಯಧಿಕ ಮೊತ್ತ 10ಲಕ್ಷ ರೂ. ಕೊಡುಗೆಯಾಗಿ ನೀಡಿದ ನೀಲೇಶ್ವರ ಘಟಕಕ್ಕೆ ಚಲನಚಿತ್ರ ನಿರ್ದೇಶಕಿ ಮತ್ತು ನಟಿ ಆದಿತ್ಯ ಬೇಬಿ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ವರ್ತಕರ ಕುಟುಂಬ ಕಲ್ಯಾಣ ಯೋಜನೆಯ ಚೆಕ್ ವಿತರಣೆ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಜೆ. ಸಜಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಎ. ಎ. ಅಜೀಜ್ ವಂದಿಸಿದರು.