HEALTH TIPS

ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ದುಬೈನ ಹಿರಿಯ ಸಾಂಸ್ಕøತಿಕ ಸಂಘಟಕ ಜೋಸೆಪ್ ಮಥಾಯಸ್‍ಗೆ ಗೌರವ

ಕಾಸರಗೋಡು: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆಯು ನಗರದ ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮವನ್ನು ಕಾಸರಗೋಡು ನಗರಸಭೆ ಅಧ್ಯಕ್ಷ ಅಬ್ಬಾಸ್ ಬೀಗಂ ಉದ್ಘಾಟಿಸಿ ಮಾತನಾಡಿದರು. ಸಂಘದ ವತಿಯಿಂದ ದುಬೈನ ಉದ್ಯಮಿ, ಹಿರಿಯ ಸಾಂಸ್ಕೃತಿಕ ಸಂಘಟಕ ಜೋಸೆಪ್ ಮಥಾಯಿಸ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಜೋಸೆಪ್ ಮಥಾಯಿಸ್, ದೇಶದ ನಾಲ್ಕನೇ ಅಂಗವಾದ ಪತ್ರಿಕೋದ್ಯಮಕ್ಕೆ ಅದರದ್ದೇ ಆದ ಘನತೆ ಗೌರವವಿದೆ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ನಮ್ಮ ಸಂವಿಧಾನದ ಆಶಯಗಳ ರಕ್ಷಣೆಯ ಮಹತ್ತರವಾದ ಜವಾಬ್ದಾರಿ ಪತ್ರಿಕಾರಂಗಕ್ಕಿದೆ ನಮ್ಮ ಕನ್ನಡ ಪತ್ರಿಕೋದ್ಯಮಕ್ಕೆ ಅದರದ್ದೇ ಆದ ಇತಿಹಾಸ ಇದೆ. ಕೇರಳ ರಾಜ್ಯದಲ್ಲಿ ಇದ್ದುಕೊಂಡು ಕನ್ನಡ ಪತ್ರಿಕೆಗಳಿಗೆ ವರದಿ ಮಾಡುವ ಇಲ್ಲಿನ ಕನ್ನಡ ಪತ್ರಕರ್ತರ ಕಾರ್ಯ ಶ್ಲಾಘನೀಯ, ಉದ್ಯೋಗದ ಭದ್ರತೆ ಇಲ್ಲದೆ ಬರೀ ಕನ್ನಡ ಭಾμÉ, ಸಾಹಿತ್ಯ ಸಂಸ್ಕೃತಿ ಬಗ್ಗೆ ಅಭಿಮಾನ ಇಟ್ಟುಕೊಂಡು ತಾವು ಕಾರ್ಯಚರಿಸುತ್ತಿದ್ದೀರಿ, ತಮ್ಮ ಕ್ಷೇಮಭಿವೃದ್ಧಿಗಾಗಿ ಸರಕಾರಗಳು ಹಾಗೂ ಧಾನಿಗಳ ಸಹಕಾರದಿಂದ ನಿದಿ ಯೊಂದನ್ನು ಸ್ಥಾಪಿಸುವ ಕಾರ್ಯ ಒಳ್ಳೆಯ ನಿರ್ಧಾರವಾಗಿದೆ. ಇದಕ್ಕಾಗಿ ಕೈಜೋಡಿಸುತ್ತೇನೆ  ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿ, ಕೌನ್ಸಿಲರ್ ವರಪ್ರಸಾದ್ ಕೊಟೆಕಣಿ, ಧಾರ್ಮಿಕ ಮುಂದಾಳು ಅರಿಬೈಲು ಗೋಪಾಲ ಶೆಟ್ಟಿ, ನಿವೃತ್ತ ಪ್ರಿನ್ಸಿಪಾಲ್ ಪೆÇ್ರ.ಎ. ಶ್ರೀನಾಥ್, ಅಖಿಲೇಶ್ ನಗುಮುಖಂ, ಟಿ. ಶಂಕನಾರಾಯಣ ಭಟ್, ಚನಿಯಪ್ಪ ನಾಯ್ಕ್, ನಿವೃತ್ತ ಉಪ ಜಿಲ್ಲಾಧಿಕಾರಿ ಶಶಿಧರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಆರಂಭದಲ್ಲಿ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ್ ತೆಕ್ಕೆಮೂಲೆ ಸ್ವಾಗತಿಸಿ, ಕೋಶಾಧಿಕಾರಿ ಶ್ರೀಕಾಂತ್ ನೆಟ್ಟಣಿಗೆ ವಂದಿಸಿದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries