ಆ ನಂತರ ಆಸ್ಟ್ರೇಲಿಯಾ, ಜಪಾನ್ ಹಾಗೂ ದಕ್ಷಿಣ ಕೊರಿಯಾ ಹೊಸ ವರ್ಷ ಸ್ವಾಗತಿಸಿದವು. ಆಸ್ಟ್ರೇಲಿಯಾದ ನಗರ ಸಿಡ್ನಿಯ ಒಪೆರಾ ಹೌಸ್ ಬಳಿ ಚಿತ್ತಾಕರ್ಷಕ ಬಾಣ ಬಿರುಸುಗಳನ್ನು ಸಿಡಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು.
ರಷ್ಯಾದಲ್ಲಿ 2025ರ ಸ್ವಾಗತಕ್ಕೆ ಕ್ಷಣಗಣನೆ
ವಿಶ್ವದ ಅನೇಕ ಪ್ರವಾಸಿ ತಾಣಗಳಲ್ಲಿ 2023ರ ಸೂರ್ಯಾಸ್ತವನ್ನು ಕಣ್ತುಂಬಿಕೊಂಡು ಹೊಸ ವರ್ಷ ಸ್ವಾಗತಿಸಲು ಕಾತರರಾಗಿದ್ದಾರೆ. ರಾತ್ರಿಯಿಡಿ ಸಂಭ್ರಮಾಚರಣೆಗಳಲ್ಲಿ ಭಾಗಿಯಾಗುತ್ತಿದ್ದಾರೆ.
ಥೈಲ್ಯಾಂಡ್ನಲ್ಲಿ ಕೊನೆಯ ಸೂರ್ಯಾಸ್ತ ಹೀಗಿತ್ತು
ಇತ್ತ ಭಾರತದಲ್ಲೂ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದ್ದು ವರ್ಷದ ಕೊನೆ ದಿನ ಭಾನುವಾರವಾಗಿದ್ದರಿಂದ ಪ್ರವಾಸಿ ತಾಣಗಳು, ಹೋಟೆಲ್, ರೆಸಾರ್ಟ್, ರೆಸ್ಟೊರಂಟ್ಗಳು ತುಂಬಿ ತುಳುಕುತ್ತಿವೆ.