ಮುಂಬೈ: ಗೋವಾದಿಂದ ಮುಂಬೈಗೆ ಬರುತ್ತಿದ್ದ ಇಂಡಿಗೊ ವಿಮಾನಕ್ಕೆ ಸೋಮವಾರ ಸಂಜೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನವು ಮುಂಬೈನಲ್ಲಿ ಇಳಿದ ಬಳಿಕ ನಿಲ್ದಾಣದ ಸಿಬ್ಬಂದಿ ತಪಾಸಣೆ ನಡೆಸಿದರು.
ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಘೋಷಿಸಲಾಗಿತ್ತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು.
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯದ ನಿಯಮಾವಳಿಗಳನ್ನು ಪೂರೈಸಿದ ಬಳಿಕ ವಿಮಾನದ ಕಾರ್ಯಾಚರಣೆಗೆ ಮತ್ತೆ ಚಾಲನೆ ನೀಡಲಾಯಿತು ಎಂದು ಇಂಡಿಗೊ ಕಂಪನಿಯ ವಕ್ತಾರರು ತಿಳಿಸಿದ್ದಾರೆ.